ಬೆಂಗಳೂರು, ಅ.04 (DaijiworldNews/HR): ಸ್ಯಾಂಡಲ್ವುಡ್ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ನಟ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದಿನದಿಂದ ದಿನಕ್ಕೆ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ.
ಇನ್ನು ಸತ್ಯಜಿತ್ ಅವರಿಗೆ ಗ್ಯಾಂಗ್ರಿನ್ ನಿಂದಾಗಿ ಈಗಾಗಲೇ ಒಂದು ಕಾಲು ತೆಗೆಯಲಾಗಿದ್ದು, ಮಧುಮೇಹ ಹಾಗೂ ಇನ್ನಿತರ ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟ ಹಲವು ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಸತ್ಯಜಿತ್ ಅವರು ಅಪ್ಪು, ಅರಸು, ಆಪ್ತಮಿತ್ರ, ಅಭಿ ಸೇರಿದಂತೆ ನೂರಾರು ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಅಭಿನಯಿಸಿದ್ದಾರೆ.