ಮುಂಬೈ, ಅ.04 (DaijiworldNews/HR): ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿನಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ನನ್ನು ಇಂದು ವಿಚಾರಣೆ ನಡೆಸಿದ ಮುಂಬೈನ ಕಿಲ್ಲಾ ಕೋರ್ಟ್ ಅಕ್ಟೋಬರ್ 7 ರವರೆಗೆ ಎನ್ಸಿಬಿ ಕಸ್ಟಡಿಗೆ ನೀಡಿ ಆದೇಶ ನೀಡಿದೆ.
ಮುಂಬೈ ಗೋವಾ ನಡುವೆ ಸಮುದ್ರದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ಶನಿವಾರ ರಾತ್ರಿ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಆರ್ಯನ್ ಖಾನ್ ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದರು.
ಇನ್ನು ಮುಂಬೈನ ಕಿಲ್ಲಾ ಕೋರ್ಟ್ ನಲ್ಲಿ ಇಂದು ಜಾಮೀನು ಅರ್ಜಿ, ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಮಾಡಿದ್ದರ ಬಗ್ಗೆ ವಿಚಾರಣೆ ನಡೆದಿದ್ದು, ಆರ್ಯನ್ ಖಾನ್ ಮತ್ತು ಇಬ್ಬರು ಸಹಚರರನ್ನು ಮತ್ತೆ ಎನ್ಸಿಬಿ ಕಸ್ಟಡಿಗೆ ನೀಡಲಾಗಿದೆ.