ಬೆಂಗಳೂರು, . 05 (DaijiworldNews/HR): ವಿಜಯನಗರದ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಕರಬ್ಬಿ ಗ್ರಾಮದಲ್ಲಿ ನಡೆದ ಪ್ರಕರಣ ದುಃಖದ ಸಂಗತಿಯಾಗಿದ್ದು, ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆಯಲ್ಲಿ ಸಾವನ್ನಪ್ಪಿದ ಪ್ರತಿ ಕುಟುಂಬಕ್ಕೆ 3 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ" ಎಂದರು.
ಇನ್ನು ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಿ, ವರದಿ ನೀಡಲು ಸೂಚನೆ ನೀಡಲಾಗಿ" ಎಂದಿದ್ದಾರೆ.
ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಇಂದು 6ಕ್ಕೆ ಏರಿದ್ದು, ಕಳೆದೊಂದು ವಾರದಿಂದ ಘಟನೆಯಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆ ಇಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಮಕರಬ್ಬಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ಇನ್ನು ಕಲುಷಿತ ನೀರು ಸೇವನೆಯಿಂದ ವಾಂತಿಭೇದಿಯಿಂದ ಈಗಾಗಲೇ 6 ಜನರು ಮೃತಪಟ್ಟಿದ್ದು, ಅನೇಕ ಮಂದಿ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಆತಂಕದ ಜನರು ಗ್ರಾಮವನ್ನು ತೊರೆದು ಸಂಬಂಧಿಕರ ಮನೆಗೆ ತೆರಳಿದ್ದು,ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ.