ಚಂಢೀಗಡ, ಅ.05 (DaijiworldNews/HR): ಪ್ರಿಯಾಂಕಾ ಗಾಂಧಿಯನ್ನು ಬಿಡುಗಡೆಗೆ ಮಾಡದಿದ್ದರೆ ಪಂಜಾಬ್ನಿಂದ ಲಖಿಂಪುರಕ್ಕೆ ಪಾದಯಾತ್ರೆ ನಡೆಸುವುದಾಗಿ ಪಂಜಾಬ್ ಕಾಂಗ್ರೆಸ್ನ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಧು, "ಲಖಿಂಪುರ ಖೇರಿ ಹತ್ಯಾಕಾಂಡದ ಆರೋಪಿ, ಕೇಂದ್ರ ಸಚಿವರ ಮಗನನನ್ನು ನಾಳೆಯೊಳಗೆ ಬಂಧಿಸದೇ ಹೋದರೆ, ರೈತರಿಗಾಗಿ ಹೋರಾಟ ನಡೆಸುತ್ತಿರುವ ಪ್ರಿಯಾಂಕಾ ಗಾಂಧಿ ಅವರನ್ನು ಅಕ್ರಮ ಬಂಧನದಿಂದ ಬಿಡುಗಡೆ ಮಾಡದೇ ಹೋದರೆ, ಬುಧವಾರ ಪಂಜಾಬ್ ಕಾಂಗ್ರೆಸ್ ಲಖಿಂಪುರಕ್ಕೆ ಪಾದಯಾತ್ರೆ ಕೈಗೊಳ್ಳಲಾಗುವುದು" ಎಂದಿದ್ದಾರೆ.
ಇನ್ನು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಲಖಿಂಪುರದಲ್ಲಿ ಹಿಂಸಾಚಾರ ಸಂಭವಿಸಿ ನಾಲ್ವರು ರೈತರು ಸೇರಿ 8 ಮಂದಿ ಮೃತಪಟ್ಟಿದ್ದರು.