ಬೆಂಗಳೂರು, ಅ.07 (DaijiworldNews/PY): ಹಾನಗಲ್ ಹಾಗೂ ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಹಾನಗಲ್ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಮಾಜಿ ಎಂಎಲ್ಸಿ ಶಿವರಾಜ್ ಸಜ್ಜನ್ ಹಾಗೂ ಸಿಂದಗಿ ವಿಧಾನಸಭಾ ಚುನಾವಣೆಗೆ ರಮೇಶ್ ಭೂಸನೂರು ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.
ಹಾನಗಲ್ನಲ್ಲಿ ಸಂಸದ ಶಿವಕುಮಾರ್ ಉದಾಸಿ ಅವರ ಪತ್ನಿ ರೇವತಿ ಅವರಿಗೆ ಟಿಕೆಟ್ ನೀಡಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ, ಪಕ್ಷದ ವರಿಷ್ಠರು, ಮಾಜಿ ಶಾಸಕ ಹಾಗೂ ಎಂಎಲ್ಸಿ ಶಿವರಾಜ್ ಸಜ್ಜನ್ ಅವರಿಗೆ ಟಿಕೆಟ್ ನೀಡಿದೆ.
ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.