ಹುಬ್ಬಳ್ಳಿ, ಅ.07 (DaijiworldNews/HR): ಜೆಡಿಎಸ್ಗೆ ಯಾವಾಗಲೂ ಕಾಂಗ್ರೆಸ್ ಪಕ್ಷವೇ ಟಾರ್ಗೇಟ್ ಹೊರತು ಬಿಜೆಪಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಹಾಸನ, ಮಂಡ್ಯದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ. ಈ ಭಾಗದ ಉಪ ಚುನಾವಣೆಯಲ್ಲಿ ಕಣಕ್ಕಿಳಿಸುತ್ತಿರುವುದು ಬಿಜೆಪಿಗೆ ಅನುಕೂಲ ಮಾಡಿಕೊಡುವ ಕಾರಣಕ್ಕೆ. ಅದರೆ ಆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲವು ನಿಶ್ಚಿತ" ಎಂದರು.
ಇನ್ನು "ಅಲ್ಪಸಂಖ್ಯಾತರಿಗೆ ಅವಕಾಶ ಕೊಡಬಾರದು ಎಂಬುದು ನಮ್ಮ ಉದ್ದೇಶವಲ್ಲ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ನೆಲೆಯಿದೆ. ಆದರೆ ಈ ಭಾಗದಲ್ಲಿ ಅಂತಹ ಪ್ರಾಬಲ್ಯವಿಲ್ಲ. ಹಾಗುರುವಾಗ ಈ ಭಾಗದ ಚುನಾವಣೆಗಳಲ್ಲಿ ಬಿಜೆಪಿ ಅನುಕೂಲ ಮಾಡಿಕೊಡುವ ಕೆಲಸ ಜೆಡಿಎಸ್ ಪಕ್ಷದಿಂದ ಆಗುತ್ತಿದ್ದು, ಒಳ ಒಪ್ಪಂದ ಮಾಡಿಕೊಂಡಿದ್ದಾರೋ ಎನ್ನುವುದರ ಬಗ್ಗೆ ತಮಗೆ ಗೊತ್ತಿಲ್ಲ" ಎಂದಿದ್ದಾರೆ.
ಬಿಜೆಪಿಯು ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದ್ದು, ಪ್ರತಿ ದಿನವೂ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ದರ ಏರಿಕೆಯಾಗುತ್ತಿದೆ. ಇದರಿಂದ ಇತರೆ ಅಗತ್ಯ ವಸ್ತುಗಳ ಬೆಲೆ ಕೂಡ ಹೆಚ್ಚಳವಾಗಿ ಬಡವರು ಜೀವನ ನಡೆಸಿದಂತಹ ಪರಿಸ್ಥಿತಿ ತಂದೊಡ್ಡಿದ್ದಾರೆ" ಎಂದು ಆರೋಪಿಸಿದರು.