ಬೆಂಗಳೂರು, ಅ.07 (DaijiworldNews/HR): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತನಿಗೆ ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಶಾಕ್ ನೀಡಿದ್ದು, ಬಿ.ಎಸ್. ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಸಾಂದರ್ಭಿಕ ಚಿತ್ರ
ಬಿಎಸ್ವೈ ಆಪ್ತ ಸಹಾಯಕ ಉಮೇಶ್ ಅವರ ಮನೆ ಮತ್ತು ಕಚೇರಿ ಸೇರಿ 4 ಕಡೆಗಳಲ್ಲಿ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಉಮೇಶ್ ಅವರು ಮಾಜಿ ಸಿಎಂ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರಿಗೂ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ.