ಶಿಕಾರಿಪುರ, ಅ.07 (DaijiworldNews/HR): ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯನ್ನು ರಾಜಕೀಯಕ್ಕೆ ಲಿಂಕ್ ಮಾಡುವುದಿಲ್ಲ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬಿಎಸ್ವೈ ಆಪ್ತ ಉಮೇಶ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಸಂಬಂಧ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ನಾನು ಮುಖ್ಯಮಂತ್ರಿಯಾಗಿದ್ದಾಗ ಉಮೇಶ್ ನನ್ನ ಜತೆ ಕೆಲಸ ಮಾಡಿದ್ದರು. ಉಮೇಶ್ ಮನೆ ಮೇಲೆ ನಡೆದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ನಿಜ ಸಂಗತಿಗಳು ನಾಳೆ ಬಹಿರಂಗಗೊಳ್ಳುತ್ತದೆ. ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ" ಎಂದರು.
ಇನ್ನು ಐಟಿ ದಾಳಿಗಳು ಸಾಮಾನ್ಯವಾಗಿ ನಡೆಯುತ್ತದೆ. ಅಂತೆಯೇ ಉಮೇಶ್ ಅವರ ಮನೆ, ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದಿದ್ದಾರೆ.
"ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಯಾರೇ ತಪ್ಪು ಮಾಡಿದರೂ ಕಾನೂನಿನಂತೆ ಕ್ರಮ ಕೈಗೊಳ್ಳುತ್ತಾರೆ" ಎಂದು ಹೇಳಿದ್ದಾರೆ.