ಬೆಂಗಳೂರು, ಅ.07 (DaijiworldNews/HR): ರಾಜ್ಯದಲ್ಲಿ ಗುರುವಾರ 442 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 635 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಸಾಂಧರ್ಭಿಕ ಚಿತ್ರ
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಗುರುವಾರ 442 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದು 7 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಇನ್ನು ರಾಜ್ಯದಲ್ಲಿ 11,619 ಸಕ್ರಿಯ ಪ್ರಕರಣಗಳು ಇದ್ದು,ಇಂದು 1,22,647 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.36 ರಷ್ಟಿದೆ.
ಬೆಂಗಳೂರಿನಲ್ಲಿ 166 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 173 ಮಂದಿ ಗುಣಮುಖರಾಗಿ ಬಿಡುಗಡೆಯಾಗಿ ಇಂದು ಇಬ್ಬರು ಮೃತಪಟ್ಟಿದ್ದಾರೆ.