ನವದೆಹಲಿ, ಅ.08 (DaijiworldNews/PY): "ಚಾರ್ಟರ್ಡ್ ವಿಮಾನಗಳ ಮೂಲಕ ಬರುವ ವಿದೇಶಿಯರಿಗೆ ಅಕ್ಟೋಬರ್ 15ರಿಂದ ಪ್ರವಾಸಿ ವೀಸಾ ನೀಡಲಾಗುವುದು" ಕೇಂದ್ರ ಗೃಹ ಸಚಿವಾಲಯ ಹೇಳಿದೆ.
"ಚಾರ್ಟರ್ಡ್ ವಿಮಾನಗಳ ಮೂಲಕ ಭಾರತಕ್ಕೆ ಬರುವ ವಿದೇಶಿಯರಿಗೆ ಹೊಸ ಪ್ರವಾಸಿ ವೀಸಾಗಳನ್ನು ಅಕ್ಟೋಬರ್ 15ರಿಂದ ನೀಡಲು ಪ್ರಾರಂಭಿಸಲಾಗುವುದು. ವಿಮಾನಯಾನ ಸಂಸ್ಥೆಗಳು ಈ ತೀರ್ಮಾನವನ್ನು ಪರಿಶೀಲಿಸುವಂತೆ ಸರ್ಕಾರವನ್ನು ವಿನಂತಿಸಿವೆ" ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
"ಭಾರತಕ್ಕೆ ಬೇರೆ ವಿಮಾನಗಳ ಮೂಲಕ ಪ್ರಯಾಣಿಸುವ ವಿದೇಶಿ ಪ್ರವಾಸಿಗರು ನವೆಂಬರ್ 15ರಿಂದ ಎಲ್ಲಾ ಕೊರೊನಾ ಪ್ರೋಟೋಕಾಲ್ಗಳಿಗೆ ಅನುಸಾರವಾಗಿ ವೀಸಾ ನೀಡಲು ಸಾಧ್ಯವಾಗುತ್ತದೆ. ನವೆಂಬರ್ 15ರ ಬಳಿಕ ಇತರ ವಿಮಾನಗಳ ಮೂಲಕ ಭಾರತಕ್ಕೆ ಬರುವವರಿಗೆ ವೀಸಾ ನೀಡಲಾಗುವುದು" ಎಂದು ಮಾಹಿತಿ ನೀಡಿದೆ.
ಕಳೆದ ಮಾರ್ಚ್ನಲ್ಲಿ ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿದ್ದು, ಈ ಹಿನ್ನೆಲೆ ವಿದೇಶಿ ಪ್ರವಾಸಿಗರ ಭೇಟಿಗೆ ಅವಕಾಶ ನೀಡಿರಲಿಲ್ಲ. ಇದೀಗ ಪ್ರವಾಸೋದ್ಯಮಕ್ಕೆ ಪುನಶ್ಚೇತನ ನೀಡಲು ಸರ್ಕಾರ ಮುಂದಾಗಿದೆ.