ನವದೆಹಲಿ, ಅ.08 (DaijiworlNews/HR): ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ 8 ಮಂದಿ ಸಾವಿಗೀಡಾಗಿ 4 ದಿನಗಳು ಕಳೆದಿದ್ದು, ನೀವು ಎಷ್ಟುಮಂದಿ ಯನ್ನು ಬಂಧಿಸಿದ್ದೀರಿ? ಯಾರ ವಿರುದ್ಧ ಎಫ್ ಐಆರ್ ದಾಖಲಿಸಿದ್ದೀರಿ?’ ಎಂದು ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಲಖೀಂಪುರ ಘರ್ಷಣೆಗೆ ಸಂಬಂಧಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಸಿಜೆಐ ಎನ್. ವಿ.ರಮಣ ನೇತೃತ್ವದ ನ್ಯಾಯ ಪೀಠ, ಲಖೀಂಪುರ ಘಟನೆಯು ಅತ್ಯಂತ ದುರ ದೃಷ್ಟಕರ. ನಮಗೆ ಈ ಬಗ್ಗೆ ಸ್ಥಿತಿಗತಿ ವರದಿ ಸಲ್ಲಿಸಬೇಕು ಎಂದಿದೆ.
ಇನ್ನು ಹತ್ಯೆಗೀಡಾದ 8 ಮಂದಿ ಯಾರು? ಯಾರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ? ಎಷ್ಟು ಮಂದಿಯನ್ನು ಬಂಧಿಸಿದ್ದೀರಿ ಎಂಬೆಲ್ಲ ವಿವರವನ್ನೂ ನಮಗೆ ನೀಡಬೇಕು ಎಂದು ಸೂಚಿಸಿದೆ.
ಮೃತ ವ್ಯಕ್ತಿಯೊಬ್ಬರ ತಾಯಿಯು ತನ್ನ ಮಗ ನನ್ನು ಕಳೆದು ಕೊಂಡು ಆಘಾತಕ್ಕೀಡಾಗಿ ಆಸ್ಪತ್ರೆ ಸೇರಿದ್ದು, ಅವರಿಗೆ ಉ.ಪ್ರದೇಶ ಸರ್ಕಾರ ಕೂಡಲೇ ವೈದ್ಯಕೀಯ ಚಿಕಿತ್ಸೆಗೆ ನೆರವಾಗಬೇಕು ಎಂದು ನ್ಯಾಯ ಪೀಠ ಹೇಳಿದೆ.