ನವದೆಹಲಿ, ಅ.08 (DaijiworldNews/PY): ರಂಜಿತ್ ಸಿಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ದೋಷಿ ಎಂದು ಸಿಬಿಐ ವಿಶೇಷ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.
ರಂಜಿತ್ ಸಿಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್ ರಹೀಮ್ ಸಿಂಗ್ ಅವರನ್ನು ಬಂಧಿಸಲಾಗಿತ್ತು. ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧ ಮುಖ್ಯಸ್ಥರಾಗಿದ್ದ ರಾಮ್ ರಹೀಮ್ ಸಿಂಗ್ ಹಾಗೂ ಇತರ ನಾಲ್ವರು ದೋಷಿ ಎಂದು ಶುಕ್ರವಾರ ಹರಿಯಾಣ ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಡೇರಾ ಸಚ್ಚಾ ಅನುಯಾಯಿಯಾಗಿದ್ದ ರಂಜಿತ್ ಸಿಂಗ್ ಅವರನ್ನು 2002ರ ಜುಲೈ 10ರಂದು ಹತ್ಯೆ ಮಾಡಲಾಗಿತ್ತು. ರಂಜಿತ್ ಸಿಂಗ್ ಹತ್ಯೆಯಾಗಿದೆ ಎಂದು ರಂಜಿತ್ ಅವರ ಪುತ್ರ ಜಗ್ ಸೀರ್ ಸಿಂಗ್ ಸೂರು ನೀಡಿದ್ದರು. 2003 ರ ಡಿಸೆಂಬರ್ 3 ರಂದು ಸಿಬಿಐ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಲು ಆದೇಶ ನೀಡಿತ್ತು.
ಡೇರಾ ಸಚ್ಚಾ ಸೌಧ ಮುಖ್ಯಸ್ಥರಾಗಿದ್ದ ರಾಮ್ ರಹೀಮ್ ಸಿಂಗ್ ಮೇಲೆ ಅತ್ಯಾಚಾರ ಆರೋ ಕೇಳಿ ಬಂದಿತ್ತು. ಆಶ್ರಮದಲ್ಲಿದ್ದ ಇಬ್ಬರು ಭಕ್ತೆಯರ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2017ರಲ್ಲಿ ಸಿಬಿಐ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಈಗ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ರಾಮ್ ರಹೀಮ್ ಸಿಂಗ್ ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಅಕ್ಟೋಬರ್ 12ರಂದು ಪ್ರಕಟಿಸಲಾಗುತ್ತದೆ ಎಂದು ಕೋರ್ಟ್ ತಿಳಿಸಿದೆ.