ನವದೆಹಲಿ, ಅ 08 (DaijiworldNews/MS): ಜಮ್ಮು ಮತ್ತು ಕಾಶ್ಮೀರದಲ್ಲಿ ಸರಣಿ ಭಯೋತ್ಪಾದಕ ದಾಳಿಗಳನ್ನು ಖಂಡಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಎಲ್ಲ ನಾಗರಿಕರ ಸುರಕ್ಷತೆಯನ್ನು ಖಾತ್ರಿಪಡಿಸುವಂತೆ ಕೇಂದ್ರ ಸರ್ಕಾರವು ತಕ್ಷಣವೇ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
"ನಮ್ಮ ಕಾಶ್ಮೀರಿ ಸಹೋದರಿಯರು ಮತ್ತು ಸಹೋದರರ ಮೇಲೆ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳು ದುಃಖದಾಯಕ ಮತ್ತು ಖಂಡನೀಯ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ನಮ್ಮ ಕಾಶ್ಮೀರಿ ಸಹೋದರಿಯರು ಮತ್ತು ಸಹೋದರರೊಂದಿಗೆ ಇದ್ದೇವೆ. ಲ್ಲಾ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರ ಹೇಳಿಕೆಯ ಪ್ರಕಾರ ಈ ವರ್ಷ ಕಾಶ್ಮೀರದಲ್ಲಿ 28 ನಾಗರಿಕರನ್ನು ಕೊಲ್ಲಲಾಗಿದೆ. ಗುರುವಾರ ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಕಾಶ್ಮೀರಿ ಪಂಡಿತ್ ಫಾರ್ಮಸಿಸ್ಟ್, ಶಾಲೆಯ ಪ್ರಿನ್ಸಿಪಾಲ್, ಶಿಕ್ಷಕ ಮತ್ತು ಇತರ ಇಬ್ಬರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ.ಕಳೆದ ಮೂರು ದಿನಗಳಲ್ಲಿ ಕಾಶ್ಮೀರದಲ್ಲಿ ನಡೆದ ಐದನೇ ನಾಗರಿಕ ಹತ್ಯೆ ಇದಾಗಿದೆ.