ಚನ್ನಪಟ್ಟಣ, ಅ.08 (DaijiworlNews/HR): ಕಾಂಗ್ರೆಸ್ ನಾಯಕರು ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಸೋಲಿಸಲು ಅಪಪ್ರಚಾರ ನಡೆಸುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಕಾಂಗ್ರೆಸ್ ನಾಯಕರ ರಾಜಕೀಯ ನನಗೆ ಬೇಸರ ತರಿಸಿದೆ. ಜೆಡಿಎಸ್ ಪಕ್ಷವು ಬಿಜೆಪಿಯ ಬಿ ಟೀಂ ಅಂತಾರೆ. ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಹಾಕಿದ್ದಾರೆ ಅಂತಾರೆ. ಆರೋಪಗಳಿಗೂ ಒಂದು ಮಿತಿ ಬೇಡವೇ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇ ಪದೇ ನಿಮ್ಮ ಮೇಲೆ ದೂರುತ್ತಿದ್ದಾರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ಸಿದ್ದರಾಮಯ್ಯ ಅವರ ರೀತಿ ಕುಲಗೆಟ್ಟ ರಾಜಕೀಯ ನಾನು ಮಾಡುವುದಿಲ್ಲ. ಅಲ್ಪಸಂಖ್ಯಾತರು ಜೆಡಿಎಸ್ ಗೆಲ್ಲುವ ಕಡೆ ಜೆಡಿಎಸ್ ಪಕ್ಷಕ್ಕೆ ಮತ ಹಾಕಿ, ಕಾಂಗ್ರೆಸ್ ಗೆಲ್ಲುವ ಕಡೆ ಆ ಪಕ್ಷಕ್ಕೆ ಮತ ಹಾಕಿ ಎಂದು ನಾನು ಹೇಳಿರುವುದು ನಿಜ" ಎಂದು ಹೇಳಿದ್ದಾರೆ.