ನವದೆಹಲಿ, ಅ. 08 (DaijiworldNews/SM): ಬಿಎಸ್ ವೈ ಸಿಎಂ ಖುರ್ಚಿಯಿಂದ ಇಳಿದ ಬಳಿಕ ಇತ್ತೀಚಿಗಷ್ಟೇ ಸಿಎಂ ಸ್ಥಾನ ಅಲಂಕರಿಸಿರುವ ಬಸವರಾಜ್ ಬೊಮ್ಮಾಯಿಯವರೇ ಮುಂದಿನ ಚುನಾವಣೆಯ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಿದ್ದಾರೆ." ಕರ್ನಾಟಕದಲ್ಲಿ 2023ಕ್ಕೆ ನಡೆಯುವ ವಿಧಾನಸಭಾ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯುತ್ತದೆ" ಎಂದಿದ್ದಾರೆ.
ಶುಕ್ರವಾರ ನವದೆಹಲಿಯಲ್ಲಿ ಮಾತನಾಡಿರುವ ಅವರು, "ನನ್ನ ನೇತೃತ್ವದಲ್ಲಿ 2023ರ ವಿಧಾನಸಭೆ ಚುನಾವಣೆಯನ್ನು ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ನಡೆಯಲಿದೆ. ಎಷ್ಟು ವರ್ಷ ಸಿಎಂ ಆಗಿದ್ದೇ ಎನ್ನುವುದಕ್ಕಿಂತಲೂ ಇದ್ದ ಅವಧಿಯಲ್ಲಿ ಏನು ಮಾಡಿದೆ ಎನ್ನುವುದು ಮುಖ್ಯವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.
ಇನ್ನು ಸದ್ಯ ಸಿಎಂ ಆಗಿರುವ ಅವಧಿಯಲ್ಲಿ ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ನಿರ್ವಹಿಸುತ್ತೇನೆ. ನನ್ನ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆದು ಮತ್ತೊಮ್ಮೆ ಬಿಜೆಪಿ ಸರಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುತ್ತೇನೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.