ಜೇವರ್ಗಿ, ಅ.09 (DaijiworldNews/PY): "ಜನರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ಇದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಸಿಂದಗಿ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ, ಚುನಾವಣೆ ಪ್ರಚಾರಕ್ಕೆ ತೆರಳುವ ಸಂದರ್ಭ ಮಾತನಾಡಿದ ಅವರು, "ಅತಿವೃಷ್ಟಿಯಿಂದ ಬೆಳೆ ಹಾಳಾದ ರೈತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಿದ್ದೆಗಣ್ಣಿನಲ್ಲಿರುವ ಸರ್ಕಾರವನ್ನು ಬಡಿದೆಬ್ಬಿಸುವೆ" ಎಂದಿದ್ದಾರೆ.
"ಅತಿವೃಷ್ಟಿಯ ಪರಿಣಾಮ ರಾಜ್ಯದ ಅನೇಕ ಕಡೆಗಳಲ್ಲಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಆದರೂ ಕೂಡಾ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಇದು ಸರ್ಕಾರದ ವೈಫಲ್ಯವನ್ನು ತೋರಿಸುತ್ತಿದೆ" ಎಂದು ಹೇಳಿದ್ದಾರೆ.
"ಕಳೆದ ವರ್ಷವೂ ಕೂಡಾ ಅತಿವೃಷ್ಟಿ, ಭೀಮಾ ನದಿ ಪ್ರವಾಹದಿಂದ ತೀವ್ರ ತೊಂದರೆ ಅನುಭವಿಸಿದ್ದೇವೆ" ಎಂದು ರೈತ ಮಹಿಳೆಯರು ತಮ್ಮ ಅಳಲು ತೋಡಿಕೊಂಡರು.