ಮುಂಬೈ, ಅ.09 (DaijiworldNews/PY): ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್ಸಿಬಿ ಅಧಿಕಾರಿಗಳು ಚಿತ್ರ ನಿರ್ಮಾಪಕ ಇಮ್ತಿಯಾಜ್ ಖತ್ರಿ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಮುಂಬೈನ ಬಾದ್ರಾ ಪ್ರದೇಶದಲ್ಲಿರುವ ನಿರ್ಮಾಪಕ ಇಮ್ತಿಯಾಜ್ ಖತ್ರಿ ಅವರ ನಿವಾಸ ಹಾಗೂ ಕಚೇರಿಯ ಮೇಲೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದೆ.
ಮುಂಬೈ ಮೂಲದ ಬಿಲ್ಡರ್ ಪುತರನಾಗಿರುವ ಇಮ್ತಿಯಾಜ್ ಖತ್ರಿ ಬಾಲಿವುಡ್ನೊಂದಿಗೆ ನಂಟು ಹೊಂದಿದ್ದಾರೆ. ಈ ಹಿಂದೆ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಾದಕ ದ್ರವ್ಯಗಳನ್ನು ಪೂರೈಸಿದ್ದಾರೆ ಎಂದು ಆರೋಪಿಸಲಾಗಿತ್ತು ಎನ್ನಲಾಗಿದೆ.
ಶ್ರುತಿ ಮೋದಿ ಅವರಿ ಸುಶಾಂತ್ ಸಿಂಗ್ ರಜಪೂತ್ಗೆ ಇಮ್ತಿಯಾಜ್ ಡ್ರಗ್ ಪೂರೈಕೆ ಮಾಡುತ್ತಿದ್ದ ಬಗ್ಗೆ ಸಿಬಿಐ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.
ಹಡಗಿನಲ್ಲಿ ಡ್ರಗ್ಸ್ ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಎಂಟು ಮಂದಿಯನ್ನು ಮುಂಬೈಯ ಸ್ಥಳೀಯ ಕೋರ್ಟ್ವೊಂದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ಆರ್ಯನ್ ಖಾನ್ಗೆ ಮುಂಬೈ ಜಿಲ್ಲಾ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದೆ. ಈ ಹಿನ್ನೆಲೆ ಆರ್ಯನ್ ಖಾನ್ ಮುಂಬೈನ ಆರ್ಥರ್ ಜೈಲಿನಲ್ಲೇ ಉಳಿಯಬೇಕಾಗಿದೆ.