ಬಾಗಲಕೋಟೆ, ಅ.09 (DaijiworldNews/HR): ಆರ್ಎಸ್ಎಸ್ ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ. ಯಾವುದೇ ಪಕ್ಷಗಳು ಚುನಾವಣೆಯಲ್ಲಿ ಎದುರಿಸಬೇಕಿರುವುದು ಬಿಜೆಪಿಯನ್ನ ಹೊರತು ಆರ್ಎಸ್ಎಸ್ ಅಲ್ಲ. ಹಾಗಾಗಿ ವಿನಾಕಾರಣ ಸಂಘಟನೆಯನ್ನು ಚರ್ಚೆಗೆ ಎಳೆಯಬೇಡಿ ಎಂದು ಕುಮಾರಸ್ವಾಮಿ ಅವರಿಗೆ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಆರ್ಎಸ್ಎಸ್ ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವ, ಧರ್ಮ ರಕ್ಷಣೆಯ ಉದ್ದೇಶ ಹೊಂದಿದೆ "ಎಂದರು.
ಇನ್ನು ದೇವೆಗೌಡರು ಪ್ರಧಾನಿ ಆಗಿದ್ದಾಗ ಕಾಶ್ಮೀರದಲ್ಲಿ ಶಾಂತಿ ನೆಲೆಸಿತ್ತು ಎಂದು ಕುಮಾರಸ್ವಾಮಿ ಹೇಳುತ್ತಾರೆ. ಇನ್ನಷ್ಟು ದಿನ ಅವರ ಕೈಯಲ್ಲಿ ಆಡಳಿತವಿದ್ದಿದ್ದರೆ ಕಾಶ್ಮೀರ ಪಾಕಿಸ್ತಾನದ ಪಾಲಾಗುತ್ತಿತ್ತು ಎಂದಿದ್ದಾರೆ.
ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ ದೇಶ ಅಖಂಡ ಎಂಬುದನ್ನು ತೋರಿಸಿಕೊಟ್ಟಿದ್ದಾರೆ" ಎಂದು ಹೇಳಿದ್ದಾರೆ.