ಬೆಂಗಳೂರು, ಅ.09 (DaijiworldNews/HR): ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಅಲಹಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಭಾರತ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀನಂದ್ರ ಕಾಶ್ಯಪ್ ಅಧಿಸೂಚನೆ ಹೊರಡಿಸಿ, ಅರ್ಟಿಕಲ್ 217 ಅನುಸರಾವಾಗಿ ರಾಷ್ಟ್ರಪತಿಗಳು ಅಲಹಬಾದ್ ಹೈಕೋರ್ಟ್ನ ನ್ಯಾಯಮೂರ್ತಿಯಾಗಿದ್ದಂತ ರಿತು ರಾಜ್ ಅವಸ್ಥಿ ಅವರನ್ನು, ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿಗಿದೆ ಎಂದು ತಿಳಿಸಿದ್ದಾರೆ.
ಇನ್ನು ಒಟ್ಟು 13 ರಾಜ್ಯಗಳ ಹೈಕೋರ್ಟ್ಗಳಿಗೆ ಮುಖ್ಯ ನ್ಯಾಯಾಧೀಶರನ್ನು ನೇಮಕ ಮಾಡಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದು, ಕೇಂದ್ರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶನಿವಾರ ಅಧಿಸೂಚನೆ ಹೊರಡಿಸಿದ್ದಾರೆ. ಸುಪ್ರೀಂಕೋರ್ಟ್ ಶಿಫಾರಸಿನಂತೆ ಈ ಅಧಿಸೂಚನೆ ಹೊರಡಿಸಲಾಗಿದೆ.