ಬೆಂಗಳೂರು,ಅ.09 (DaijiworldNews/HR): ರಾಜ್ಯದಲ್ಲಿ ಶನಿವಾರ ಕಳೆದ 451 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 29,80,621ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿಂದು 451 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 9 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 37,875ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿಂದು 1,455 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,32,322ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯಾದ್ಯಂತ 1,20,045 ಮಂದಿಯ ಕೊರೊನಾ ಟೆಸ್ಟ್ ನಡೆಸಲಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.37ಕ್ಕೆ ಇಳಿದಿದೆ.