ದೆಹಲಿ, ಅ.09 (DaijiworldNews/HR): ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ತಕ್ಷಣವೇ ಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರದಂದು ಕಾಂಗ್ರೆಸ್ ಪಕ್ಷವು ದೇಶದಾದ್ಯಂತ ಮೌನ ವ್ರತ ಆಚರಣೆ ಮಾಡಲಿದೆ.
ಸಾಂದರ್ಭಿಕ ಚಿತ್ರ
ಅ.11 ಸೋಮವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ರಾಜಭವನ ಅಥವಾ ಕೇಂದ್ರ ಸರ್ಕಾರಿ ಕಚೇರಿಗಳ ಮುಂದೆ ಮೌನ ವ್ರತ ಆಚರಿಸುವಂತೆ ಪಕ್ಷದ ರಾಜ್ಯ ಘಟಕಗಳ ಅಧ್ಯಕ್ಷರಿಗೆ ಕಾಂಗ್ರೆಸ್ ಸೂಚನೆ ನೀಡಿದೆ ಎಂದು ವರದಿಯಾಗಿದೆ.
ಇನ್ನು ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.