ಬೆಂಗಳೂರು, ಅ. 10 (DaijiworldNews/SM): ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ದಸರಾ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಿಎಂ ಈ ಬಗ್ಗೆ ತಜ್ಞರ ಜೊತೆ ಚರ್ಚೆ ನಡೆಸುತ್ತೇವೆ. ಶಾಲೆ ಆರಂಭಗೊಳಿಸುವ ಬಗ್ಗೆ ತಜ್ಞರಿಂದ ಸಲಹೆ ಪಡೆಯಲಾಗುವುದು. ತಜ್ಞರ ಸಲಹೆಯ ಆಧಾರದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದೆಂದು ಅವರು ತಿಳಿಸಿದ್ದಾರೆ.