ಬೆಂಗಳೂರು, ಅ.11 (DaijiworldNews/HR): ಅಕ್ಟೋಬರ್ 20ರವರೆಗೆ ಶಾಲೆಗಳಿಗೆ ದಸರಾ ರಜೆಯಿದ್ದು, ಅಕ್ಟೋಬರ್ 21ರಿಂದ ಬಿಸಿಯೂಟ ಪುನರಾರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, "ದಸರಾ ನಂತ್ರ ತಾಂತ್ರಿಕ ತಜ್ಞರ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಶಾಲೆಗಳ ಆರಂಭ ಕುರಿತಂತೆ ಚರ್ಚಿಸಲಾಗುತ್ತದೆ. ಅಕ್ಟೋಬರ್ 21ರಿಂದ ಮಧ್ಯಾಹ್ನದ ಬಿಸಿಯೂಟ ಆರಂಭಿಸಲಾಗುತ್ತದೆ. 10ನೇ ತರಗತಿವರೆಗೆ ಬಿಸಿಯೂಟ ನೀಡಲಾಗುತ್ತದೆ" ಎಂದರು.
ಇನ್ನು ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ 352 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿದ್ದು, ಈ ಪರೀಕ್ಷೆಗೆ 53,155 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಇವರಲ್ಲಿ 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಶೇ.55.54 ಫಲಿತಾಂಶ ಬಂದಿದೆ" ಎಂದು ತಿಳಿಸಿದ್ದಾರೆ.