ಮುಜಾಫರ್ನಗರ, ಅ.11 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಹಾಗೂ ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸುದ್ದು, ಸುಮಾರು 750 ಮಂದಿ ಸಾವನ್ನಪ್ಪಿದ್ದು, ಇದನ್ನು ಕೇಂದ್ರ ಸರ್ಕಾರ ಕಡೆಗಣಿಸುತ್ತಿದೆ‘ ಎಂದು ಆರೋಪಿಸಿದ್ದಾರೆ.
ಇನ್ನು "ದೇಶದಲ್ಲಿ ಸರಕುಗಳ ಬೆಲೆ ಹೆಚ್ಚಾಗುತ್ತಿದೆಯೇ ಹೊರತು ರೈತರ ಆದಾಯ ಮಾತ್ರ ಹೆಚ್ಚಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಕೇವಲ ಉದ್ಯಮಿಗಳನ್ನಷ್ಟೇ ಬೆಂಬಲಿಸುತ್ತಿದೆ" ಎಂದರು.
ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಕಳೆದ ವರ್ಷದ ಸೆಪ್ಟೆಂಬರ್ನಿಂದ ಸಾವಿರಾರು ರೈತರು ದೆಹಲಿಯ ಗಡಿ ಭಾಗಗಳಲ್ಲಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.