ಮುಂಬೈ, ಅ 11 (DaijiworldNews/MS): ಐಷಾರಾಮಿ ಹಡಗೊಂದರಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ ಆರೋಪದ ಮೇರೆಗೆ ನ್ಯಾಯಾಂಗ ಬಂಧನದಲ್ಲಿರುವ ನಟ ಶಾರೂಖ್ ಪುತ್ರ ಆರ್ಯನ್ ಭಾರೀ ಹಿನ್ನಡೆಯಾಗಿದ್ದು, ಅವರಿಗೆ ಮೂರನೇ ಬಾರಿಗೆ ಜಾಮೀನು ತಿರಸ್ಕರಿಸಲಾಗಿದ್ದು, ಮಾದಕದ್ರವ್ಯ ನಿಯಂತ್ರಣ ಬ್ಯೂರೋ (ಎನ್ಸಿಬಿ) ತನ್ನ ಹೇಳಿಕೆಯನ್ನು ನ್ಯಾಯಾಲಯಕ್ಕೆ ನೀಡಿದ ನಂತರ ಆರ್ಯನ್ ಜಾಮೀನು ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.
ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ಆರ್ಯನ್ ಖಾನ್ ಮತ್ತು ಇತರರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಇಂದು ಮುಂಬೈನ ವಿಶೇಷ ಎನ್ಡಿಪಿಎಸ್ ನ್ಯಾಯಾಲಯ ನಡೆಸಿತು.
ಸದ್ಯ ಮುಂಬೈನ ಅರ್ಥರ್ ಜೈಲಿನಲ್ಲಿ ಆರ್ಯನ್ ಇದ್ದು, ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡಲು ಗುರವಾರದವರೆಗೆ ಕಾಲಾವಕಾಶ ನೀಡುವಂತೆ ಎನ್ ಸಿಬಿ ಪರ ವಕೀಲರು ಕೋರ್ಟ್ ಗೆ ಮನವಿ ಮಾಡಿದ್ದರು. ಆದರೆ ಕೋರ್ಟ್ ಎರಡು ದಿನಗಳ ಕಾಲ ಕಾಲಾವಕಾಶ ನೀಡಿ ಜಾಮೀನು ಅರ್ಜಿ ವಿಚಾರಣೆಯನ್ನ ಬುಧವಾರಕ್ಕೆ ಮುಂದೂಡಿದೆ.