ಮೈಸೂರು, ಅ.11 (DaijiworldNews/HR): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಕೀಯ ಪುಕ್ಕಲುತನವಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸೋನಿಯಾ ಗಾಂಧಿ ಕರೆದು ಮಾತನಾಡಿದಾಗ, ರಾಷ್ಟ್ರ ರಾಜಕಾರಣಕ್ಕೆ ಬರುವೆ. ನನ್ನನ್ನೇ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ ಎಂದು ಹೇಳುವ ಧೈರ್ಯ ಪ್ರದರ್ಶಿಸಬೇಕಿತ್ತು" ಎಂದರು.
ಇನ್ನು ಸಿದ್ದರಾಮಯ್ಯ ನಿಷ್ಕ್ರಿಯಗೊಳಿಸಿದ ಲೋಕಾಯುಕ್ತ ಸಂಸ್ಥೆಯನ್ನು ಮತ್ತೆ ಸದೃಢಗೊಳಿಸಿ. ಹಿಂದೆ ಇದ್ದ ಅಧಿಕಾರ ನೀಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವಿಶ್ವನಾಥ್ ಒತ್ತಾಯಿಸಿದ್ದಾರೆ.