ನವದೆಹಲಿ, ಅ.11 (DaijiworldNews/HR): ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ದೇಶಮುಖ್ ಅವರು ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದು ಇದೀಗ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ) ಸೋಮವಾರದಿಂದ ಶೋಧ ಕಾರ್ಯ ಆರಂಭಿಸಿದೆ.
ಅಪರಾಧ ಸಂಚು ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್ ಅಡಿಯಲ್ಲಿ ಅನಿಲ್ ದೇಶಮುಖ್ ಮತ್ತು ಇತರೆ ಕೆಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.
ಇನ್ನು ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶಮುಖ್ ವಿರುದ್ಧ ಆರೋಪಗಳು ಕೇಳಿಬಂದಿದ್ದವು ಎನ್ನಲಾಗಿದೆ.