ಬೆಂಗಳೂರು, ಅ.11 (DaijiworldNews/PY): "ಹೆಚ್ಚು ಉದ್ಯೋಗ ಸೃಷ್ಟಿ ಮಾಡುವವರಿಗೆ ಸರ್ಕಾರ ಪೋತ್ಸಾಹ ನೀಡಲಿದೆ" ಎಂದು ಸಿಎಂ ಬಸರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಕೈಗಾರಿಕೆ ಹಾಗೂ ವಾಣಿಜ್ಯ ಇಲಾಖೆ ಆಯೋಜಿಸಿದ್ದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
"ಕೈಗಾರಿಕಾ ನೀತಿಯೊಂದಿಗೆ ಉದ್ಯೋಗ ನೀತಿಯನ್ನೂ ಜಾರಿಗೊಳಿಸಲಾಗುವುದು. ದೇಶದಲ್ಲಿ ಅತಿ ಹೆಚ್ಚು ನವೋದ್ಯಮಗಳು ಬೆಂಗಳೂರಿನಲ್ಲಿವೆ. ಹೂಡಿಕೆಗೆ ಕರ್ನಾಟಕದಲ್ಲಿ ಉತ್ತಮ ವಾತಾವರಣವಿದೆ" ಎಂದಿದ್ದಾರೆ.
ಈ ಸಂದರ್ಭ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ್, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.