ಬೆಂಗಳೂರು,ಅ.11 (DaijiworldNews/HR): ಸೋನಿಯಾಗಾಂಧಿ ಅವರನ್ನು ಭೇಟಿಯಾದಾಗ ರಾಷ್ಟ್ರ ರಾಜಕಾರಣದ ವಿಷಯ ಚರ್ಚೆಯೇ ನಡೆಸಿಲ್ಲ. ಆದರೂ ಕೆಲ ಪತ್ರಿಕೆಗಳಲ್ಲಿ ಕಲ್ಪಿತ ವರದಿಗಳು ಪ್ರಸಾರವಾಗುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸೋನಿಯಾಗಾಂಧಿ ಅವರು ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ನನಗೆ ಆಹ್ವಾನವನ್ನೇ ನೀಡಿಲ್ಲ. ಆ ವಿಷಯದ ಬಗ್ಗೆ ಅವರು ಪ್ರಸ್ತಾಪವನ್ನೇ ಮಾಡಿಲ್ಲ. ಆದರೂ ಅವರಿಗೆ ಈ ವಿಷಯದ ಬಗ್ಗೆ ಬೇಜಾರಾಗಿದೆ ಎಂದರೆ ನಾನು ಯಾವ ರೀತಿ ಸ್ಪಷ್ಟನೆ ಕೊಡಬೇಕು? ಎಂದು ಪ್ರಶ್ನಿಸಿದ್ದಾರೆ.
ಇನ್ನು "ಈ ವಿಚಾರದ ಕುರಿತು ಮಾಧ್ಯಮ, ಪತ್ರಿಕೆಗಳಲ್ಲಿ ಕಲ್ಪಿತ ವರದಿಗಳು ಬರುತ್ತಿದ್ದು, ಇದೇ ಮುಂದುವರೆದರೇ ಪತ್ರಿಕಾ ಧರ್ಮವನ್ನು ಮರೆತಿವೆ ಎಂಬುದಾಗಿ ಹೇಳಬೇಕಾಗುತ್ತದೆ" ಎಂದು ಎಂದಿದ್ದಾರೆ.