ಬೆಂಗಳೂರು, ಅ. 11 (DaijiworldNews/SM): ಮಹಿಳೆಯರ ಕುರಿತಂತೆ ನೀಡಿರುವ ಹೇಳಿಕೆ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಆಧುನಿಕ ಮಹಿಳೆಯರು ಮದುವೆಯಾಗಲು, ಮಕ್ಕಳನ್ನು ಪಡೆಯಲು ಇಚ್ಚಿಸುವುದಿಲ್ಲ ಎಂಬ ತಮ್ಮ ಹೇಳಿಕೆ ನೀಡಿದ್ದರು. ಈ ವಿಚಾರ ತೀವ್ರ ಚರ್ಚೆಯಾಗುತ್ತಿದ್ದಂತೆ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಒಂಟಿ ಜೀವನ ಬಯಸುವ ಮಹಿಳೆಯರನ್ನು ಪ್ರತ್ಯೇಕಿಸುವ ಉದ್ದೇಶವಿಲ್ಲ, ಅದು ಸರ್ವೆಯೊಂದನ್ನು ಆಧರಿಸಿದೆ. ಅದರಲ್ಲಿ ಯುವ ಜನರು ಯಾವ ರೀತಿಯ ಮನೋಭಾವ ಹೊಂದಿದ್ದಾರೆ ಎಂಬುದನ್ನು ಅಂಕಿಸಂಖ್ಯೆಗಳೊಂದಿಗೆ ಹೇಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ದೇಶದಲ್ಲಿ ಅನೇಕ ಮಂದಿ ಆಧುನಿಕ ಮಹಿಳೆಯರು, ಒಂಟಿಯಾಗಿ ಬದುಕಲು ಇಷ್ಟಪಡುತ್ತಾರೆ. ಮದುವೆಯಾದರೂ ಕೂಡಾ ಮಕ್ಕಳನ್ನು ಪಡೆಯಲು ಇಚ್ಚಿಸುವುದಿಲ್ಲ. ಬಾಡಿಗೆ ತಾಯ್ತನವನ್ನು ಬಯಸುತ್ತಾರೆ. ಈ ರೀತಿಯ ಚಿಂತನೆ ಒಳ್ಳೆಯದಲ್ಲಾ ಎಂದು ನಿಮ್ಹಾನ್ಸ್ ಸಂಸ್ಥೆಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಸಂದರ್ಭದಲ್ಲಿ ಡಾ. ಕೆ. ಸುಧಾಕರ್ ಹೇಳಿದ್ದರು.
ಈ ಹೇಳಿಕೆ ವಿವಾದವನ್ನು ಹುಟ್ಟುಹಾಕಿತ್ತು. ಈ ಹಿನ್ನೆಲೆಯಲ್ಲಿ ಸಚಿವರು ಸ್ಪಷ್ಟನೆ ನೀಡಿದ್ದಾರೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಹೆಣ್ಣು ಮಗಳ ತಂದೆಯಾಗಿ, ವೈದ್ಯನಾಗಿ ಮಹಿಳೆಯರಿಗೆ ಸಂಬಂಧಿಸಿದ ಸೂಕ್ಷ್ಮತೆ ಹಾಗೂ ಅವರ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.