ಬೆಂಗಳೂರು, ಅ.12 (DaijiworldNews/HR): ಯಡಿಯೂರಪ್ಪ, ಸಿದ್ದರಾಮಯ್ಯ ಮತ್ತು ದೇವೇಗೌಡರನ್ನು ಒಂದೇ ಪಕ್ಷದಲ್ಲಿ ಇರುವಂತೆ ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, " ಎಲ್ಲರೂ ಯಾವುದು ಆಗಲ್ಲ ಎಂದು ಎಲ್ಲರೂ ಭಾವಿಸಿರುತ್ತಾರೋ ಅಂತಹ ಕೆಲಸವನ್ನು ನಾನು ಮಾಡಿ ತೋರಿಸುತ್ತೇನೆ. ಸಿದ್ದರಾಮಯ್ಯ, ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಇನ್ಮುಂದೆ ಒಂದೇ ಪಕ್ಷದಲ್ಲಿ ಇರುತ್ತಾರೆ. ನನ್ನ ಈ ನಿಲುವಿನಿಂದ ಹಿಂದೆ ಸರಿಯುವ ಮಾತೇ ಇಲ್ಲ" ಎಂದರು.
ಇನ್ನು ಕಲ್ಲನ್ನು ಮಾತನಾಡಿಸಿ ಅದರಿಂದ ನೀರು ತೆಗೆಯುವ ವ್ಯಕ್ತಿ ನಾನು. ದೇವೇಗೌಡರು ದೇಶದ ಪ್ರಧಾನಿಯಾಗ್ತಾರೆ ಎಂದು ಯಾರು ಊಹೆ ಕೂಡ ಮಾಡಿರಲಿಲ್ಲ. ಆದರೆ ನಾನು ಅದನ್ನು ಮಾಡಿ ತೋರಿಸಿದ್ದೇನೆ" ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ರನ್ನು ಕೂಡ ಇದೇ ಪಕ್ಷಕ್ಕೆ ತರುತ್ತೇನೆ. ಈ ಬಗ್ಗೆ ಸಿದ್ದರಾಮಯ್ಯ ಬಳಿ ಈ ಹಿಂದೆಯೇ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.