ಬೆಂಗಳೂರು, ಅ.12 (DaijiworldNews/HR): ಸೋನಿಯಾ ಗಾಂಧಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು, ರಾಹುಲ್ ಗಾಂಧಿಯವರೇ ಪಕ್ಷವನ್ನು ಮುನ್ನಡೆಯಬೇಕು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, "ರಾಹುಲ್ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷರಾಗುವಂತೆ ಸಲಹೆ ನೀಡಿದ್ದೇನೆ. ಹಿಂದಿನಿಂದಲೂ ನಾನಿದನ್ನೇ ಹೇಳಿಕೊಂಡು ಬಂದಿದ್ದೇನೆ. ಸೋನಿಯಾ ಅವರು ತಮ್ಮ ಕರ್ತವ್ಯ ನಿಭಾಯಿಸಲು ಅಸಮರ್ಥರಾಗಿದ್ದಾರೆಂಬುದು ನಾನು ಹೇಳುವಿಲ್ಲ. ಆದರೆ ಅವರ ಆರೋಗ್ಯ ಹದಗೆಡುತ್ತಿದೆ. ಹೀಗಾಗಿಯೇ ಅಧ್ಯಕ್ಷ ಸ್ಥಾನ ಶೀಘ್ರದಲ್ಲಿ ವಹಿಸಿಕೊಳ್ಳುವಂತೆ ರಾಹುಲ್ ಗಾಂಧಿಗೆ ಸಲಹೆ ನೀಡಿದ್ದೇನೆ" ಎಂದರು.
ಇನ್ನು ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಸೋನಿಯಾ ಗಾಂಧಿಯವರು ನನಗೆ ಆಹ್ವಾನವನ್ನೇ ನೀಡಿಲ್ಲ. ಆ ವಿಷಯದ ಬಗ್ಗೆ ಸೋನಿಯಾ ಗಾಂಧಿ ಅವರು ಪ್ರಸ್ತಾಪವನ್ನೇ ಮಾಡಲಿಲ್ಲ. ಆದರೂ ಅವರಿಗೆ ಈ ವಿಷಯದ ಬಗ್ಗೆ ಬೇಜಾರಾಗಿದೆ ಎಂದರೆ ಯಾವ ರೀತಿ ಸ್ಪಷ್ಟನೆ ಕೊಡಬೇಕು? ಎಂದು ಹೇಳಿದ್ದಾರೆ.