ಶ್ರೀನಗರ, ಅ.12 (DaijiworldNews/HR): ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಭದ್ರತಾ ಪಡೆಗಳು ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಶೋಪಿಯಾನ್ನ ಫೀರಿಪೊರಾ ಪ್ರದೇಶದಲ್ಲಿ ಶೋಧಕಾರ್ಯ ಆರಂಭಿಸಿದ್ದು, ಕಾರ್ಯಾಚರಣೆ ವೇಳೆ ಉಗ್ರರು, ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಇಮಾಮ್ಸಾಹಿಬ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.