ಬೆಂಗಳೂರು, ಅ.12 (DaijiworldNews/HR): ಬಿಜೆಪಿ ಸರ್ಕಾರ ಸತ್ತವರಿಗೇ ಪರಿಹಾರ ನೀಡಿಲ್ಲ. ಇನ್ನು ಮಳೆ ಸಂತ್ರಸ್ತರಿಗೆ ಕೊಡುತ್ತಾರೆಯೇ? ಈ ಸರಕಾರಕ್ಕೆ ಬಡವರಿಗೆ ನೆರವಾಗುವ ಅನುಭವವಾಗಲಿ, ಮನಸ್ಥಿತಿಯಾಗಲಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಕಲ್ಲಿದ್ದಲು ಕೊರತೆ, ವಿದ್ಯುತ್ ಕಡಿತ ವಿಚಾರವಾಗಿ ನಾನು ಕೂಡ ವಿಶ್ಲೇಷಣೆ ಮಾಡುತ್ತಿದ್ದು, ನಮ್ಮ ಆಡಳಿತದಲ್ಲಿ ವಿದ್ಯುತ್ ಉತ್ಪಾದನೆ ಅಗತ್ಯಕ್ಕಿಂತ ಹೆಚ್ಚಾಗಿದ್ದು, ಅದನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದೆವು" ಎಂದರು.
ಇನ್ನು ನನಗೆ ಬಂದಿರುವ ಮಾಹಿತಿ ಪ್ರಕಾರ ಒಂದೊಂದು ದಿನದ ಕಲ್ಲಿದ್ದಲು ಮಾತ್ರ ಇದೆ. ಇದು ರಾಜ್ಯ, ಕೇಂದ್ರ ಸರ್ಕಾರದ ವೈಫಲ್ಯ. ಕಲ್ಲಿದ್ದಲು ಕೊರತೆಗೆ ಬೇರೆ ಕಾರಣವೇನಾದರೂ ಇದೆಯೇ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ" ಎಂದು ಹೇಳಿದ್ದಾರೆ.