ನವದೆಹಲಿ, ಅ. 12 (DaijiworldNews/SM): ದುರ್ಗಾ ಪೂಜೆಯ ಸಂದರ್ಭದಲ್ಲಿ ಸಮಸ್ಯೆಯಾಗದಂತೆ ಪ್ರತಿ ದಿನ 1.55-1.6 ಮಿಲಿಯನ್ ಟನ್ ಕಲ್ಲಿದ್ದಲು ಪೂರೈಸಲು ಕೇಂದ್ರ ಸರಕಾರ ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್ ಗೆ ಸೂಚನೆ ನೀಡಿದೆ.
ದುರ್ಗಾ ಪೂಜೆಯ ಅವಧಿಯಲ್ಲಿ ಪ್ರತಿ ದಿನ 1.55-1.6 ಮಿಲಿಯನ್ ಟನ್ಗಳಷ್ಟು ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸಬೇಕು. ಅಲ್ಲದೆ, ಅಕ್ಟೋಬರ್ 20 ರ ನಂತರ ಅದನ್ನು 1.7 ಮಿಲಿಯನ್ ಟನ್ ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.
ಹಬ್ಬದ ಸೀಸನ್ ಈಗಾಗಲೇ ಆರಂಭವಾಗಿರುವ ಸಮಯದಲ್ಲಿ ದೇಶದ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಎದುರಾಗಿದೆ. ಹಲವು ರಾಜ್ಯಗಳಲ್ಲಿ ಅನಿಯಮಿತ ಲೋಡ್ ಶೆಡಿಂಗ್ ಕೂಡ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಈ ಸೂಚನೆ ಮಹತ್ವ ಪಡೆದುಕೊಂಡಿದೆ.