ಬೆಂಗಳೂರು, ಅ. 12 (DaijiworldNews/SM): ಮುಜರಾಯಿ ಇಲಾಖೆಯಡಿ ಬರುವ ಅರ್ಚಕರಿಗೆ ಸರಕಾರ ದಸರಾ ಹಿನ್ನೆಲೆ ಬಂಪರ್ ಕೊಡುಗೆ ನೀಡಿದೆ.
ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂಬುವುದಾಗಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಮುಜರಾಯಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ವಿಮಾ ಯೋಜನೆ ಜಾರಿಗೆ ತರಲಾಗಿದೆ. ಅಲ್ಲದೆ, ಅದರ ಜೊತೆಗೆ ಅರ್ಚಕರ ಆರೋಗ್ಯ ರಕ್ಷಣೆಗೆ ವಿನೂತನ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಿದ್ದೇವೆ. ಅದರಿಂದ ಮುಜರಾಯಿ ಇಲಾಖೆಯ ಸುಮಾರು 37 ಸಾವಿರ ಸಿಬ್ಬಂದಿಗೆ ಪ್ರಯೋಜನವಾಗಲಿದೆ, ಎಂದು ಅವರು ತಿಳಿಸಿದ್ದಾರೆ.