ಬೆಂಗಳೂರು,ಅ 13 (DaijiworldNews/MS): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಹಾಗೂ ರಾಜ್ಯದಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿರುವುದರಿಂದ ಅ.13 ರಿಂದ 15ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಂಡಮಾನ್ ಸಮುದ್ರದ ಉತ್ತರ ಭಾಗದಲ್ಲಿ ಚಂಡಮಾರುತ ಪರಿಚಲನೆಯಿದೆ. ಇದರ ಪ್ರಭಾವ, ವಾಯುಭಾರ ಕುಸಿತ ಉಂಟಾಗಿದ್ದು ಜೊತೆಗೆ ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿ ಗಾಳಿಯ ಪರಿಣಾಮ ರಾಜ್ಯದಲ್ಲಿ ಮೂರ್ನಾಲ್ಕು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಇನ್ನೊಂದೆಡೆ ಕರಾವಳಿಯಾದ್ಯಂತ ಮಂಗಳವಾರ ಬಿರುಸಿನ ಮಳೆಯಾಗಿದ್ದು,ಜನಜೀವನ ಸಿದ್ದವಾಗಿದೆ. ತಗ್ಗು ಪ್ರದೇಶಗಳು ನೀರಿನಿಂದ ಅವೃತ್ತವಾಗಿದೆ. ಕಟಾವಿಗೆ ಸಿದ್ದವಾಗುತ್ತಿರುವ ಗದ್ದೆಗಳಲ್ಲಿ ನೀರು ತುಂಬಿದ್ದು ಭತ್ತದ ಬೆಳೆ ನಷ್ಟವಾಗುವ ಚಿಂತೆಯಲ್ಲಿ ರೈತರಿದ್ದಾರೆ.