ಹೈದರಾಬಾದ್, ಅ.13 (DaijiworldNews/HR): ಬಿಜೆಪಿಯು ಶೀಘ್ರದಲ್ಲೇ ಸಾವರ್ಕರ್ ಅನ್ನು ರಾಷ್ಟ್ರಪಿತ ಎಂದು ಘೋಷಣೆ ಮಾಡುತ್ತದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ಹೇಳಿದ್ದಾರೆ.
ಬ್ರಿಟಿಷರ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಲು ಸಾವರ್ಕರ್ಗೆ ಹೇಳಿದ್ದು ಮಹಾತ್ಮ ಗಾಂಧಿ ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಓವೈಸಿ, "ಬಿಜೆಪಿ ಪಕ್ಷವು ತನ್ನದೇ ಆದ, ವಿಕೃತವಾದ ಇತಿಹಾಸವನ್ನು ಪ್ರಸ್ತುತ ಪಡಿಸುತ್ತಿದ್ದು,ರಾಷ್ಟ್ರಪಿತ ಮಹಾತ್ಮ ಗಾಂಧಿಯ ಬದಲಾಗಿ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ಆರೋಪವನ್ನು ಹೊತ್ತಿರುವ ಸಾವರ್ಕರ್ ಅನ್ನು ದೇಶದ ಪಿತಾಮಹ ಎಂದು ಹೇಳುತ್ತಾರೆ" ಎಂದರು.
ಇನ್ನು ಹಿಂದುತ್ವದ ಐಕಾನ್ ಆದ ವೀರ ಸಾರ್ವಕರ್ ಅಂಡಮಾನ್ ಜೈಲಿನಲ್ಲಿ ಇದ್ದಾಗ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಸಾವರ್ಕರ್ಗೆ ಹೇಳಿದ್ದು ಮಹಾತ್ಮ ಗಾಂಧಿಜಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದರು.