ಮುಂಬೈ, ಅ.13 (DaijiworldNews/HR): ಡ್ರಗ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ಶಾರೂಖ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ.
ಇಂದು ಆರ್ಯನ್ ಖಾನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಆರಂಭವಾಗುತ್ತಿದ್ದಂತೆ, ಎನ್ ಸಿ ಬಿ ಪರ ವಕೀಲರು ಜಾಮೀನು ನೀಡುವುದಕ್ಕೆ ಆಕ್ಷೇಪಣೆಯನ್ನು ವ್ಯಕ್ತ ಪಡಿಸಿದ್ದು, ಇತ್ತ ಗ ಆರ್ಯನ್ ಖಾನ್ ಅವರ ಜಾಮೀನು ಅರ್ಜಿಗಾಗಿ ಬುಧವಾರ ವಿಶೇಷ ಎನ್ ಡಿಪಿಎಸ್ ನ್ಯಾಯಾಲಯದಲ್ಲಿ ವಾದಿಸಿದ ಹಿರಿಯ ವಕೀಲ ಅಮಿತ್ ದೇಸಾಯಿ ಅವರು ಅಕ್ಟೋಬರ್ 2 ರಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ದಾಳಿ ನಡೆಸಿದ ಕ್ರೂಸ್ ನಲ್ಲಿ ಆರ್ಯನ್ ಖಾನ್ ಇರಲಿಲ್ಲ ಎಂದು ಹೇಳಿದ್ದಾರೆ.
ಇನ್ನು ಎಲ್ಲಾ ವಾದ, ವಿವಾದ ಆಲಿಸಿದ ಬಳಿಕ ಪ್ರಕರಣದ ವಿಚಾರಣೆ ಬಾಕಿ ಇರುವ ಕಾರಣ, ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಎನ್ ಡಿ ಪಿ ಎಸ್ ವಿಶೇಷ ಕೋರ್ಟ್ ನ ನ್ಯಾಯಾಧೀಶರು ನಾಳೆಗೆ ಮುಂದೂಡಿಕೆ ಮಾಡಿದ್ದಾರೆ.