ನವದೆಹಲಿ, ಅ 15 (DaijiworldNews/MS): ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ ಮತ್ತು ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರವು ಸ್ವೀಕಾರಾರ್ಹವಾಗಿದೆ ಎಂದು ಪಂಜಾಬ್ ಕಾಂಗ್ರೆಸ್ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಗುರುವಾರ ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಹಿರಿಯ ನಾಯಕರಾದ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ಪಂಜಾಬ್ ಉಸ್ತುವಾರಿ ಹರೀಶ್ ರಾವತ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ ಈ ವಿಚಾರ ತಿಳಿಸಿದರು.
"ನಾನು ಈಗಾಗಲೇ ಪಕ್ಷದ ಹೈಕಮಾಂಡ್ಗೆ ನನ್ನ ಕಳವಳವನ್ನು ವ್ಯಕ್ತಪಡಿಸಿದ್ದೇನೆ. ಕಾಂಗ್ರೆಸ್ ಅಧ್ಯಕ್ಷರು ತೆಗೆದುಕೊಳ್ಳುವ ಯಾವುದೇ ನಿರ್ಧಾರವು ಪಕ್ಷ ಮತ್ತು ಪಂಜಾಬ್ನ ಹಿತಾಸಕ್ತಿಗೆ ಪೂರಕವಾಗಿರಲಿವೆ ಎಂಬ ಭರವಸೆ ಇದೆ. ನಾಯಕತ್ವದ ಮೇಲೆ ನನಗೆ ಪೂರ್ಣ ನಂಬಿಕೆ ಇದೆ' ಎಂದು ಹೇಳಿದ್ದಾರೆ.
'ನನ್ನ ಕಳಕಳಿ ಏನೆಂಬುದನ್ನು ಈಗಾಗಲೇ ಹೈಕಮಾಂಡ್ಗೆ ತಿಳಿಸಿದ್ದೇನೆ. ಅಧ್ಯಕ್ಷರು ತೆಗೆದುಕೊಳ್ಳುವ ನಿರ್ಧಾರಗಳು ಪಕ್ಷದ ಮತ್ತು ಪಂಜಾಬ್ನ ಹಿತಾಸಕ್ತಿಗೆ ಪೂರಕವಾಗಿರಲಿವೆ ಎಂಬ ಭರವಸೆ ಇದೆ. ನಾಯಕತ್ವದ ಮೇಲೆ ನನಗೆ ಪೂರ್ಣ ನಂಬಿಕೆ ಇದೆ" ಎಂದು ಹೇಳಿದ್ದಾರೆ.
'ಪಂಜಾಬ್ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವಂತೆ, ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿ ಮತ್ತು ಅದನ್ನು ಬಲಪಡಿಸಲು ಬಲಪಡಿಸುವಂತೆ ಸಿಧು ಅವರಿಗೆ ಸೂಚಿಸಲಾಗಿದೆ' ಎಂದು ಹರೀಶ್ ರಾವತ್ ಹೇಳಿದ್ದಾರೆ.
ಚರಣ್ಜಿತ್ ಸಿಂಗ್ ಚನ್ನಿ ಅವರನ್ನು ಪಂಜಾಬ್ನ ನೂತನ ಮುಖ್ಯಮಂತ್ರಿಯಾಗಿ ನೇಮಕ ಮಾಡಿದ ಬಳಿಕ ಪಕ್ಷದ ನಿರ್ಧಾರಗಳ ವಿರುದ್ಧ ಬಂಡಾಯವೆದ್ದಿದ್ದ ಸಿಧು ಇತ್ತೀಚೆಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಅದನ್ನು ಹೈಕಮಾಂಡ್ ಅಂಗೀಕರಿಸಿರಲಿಲ್ಲ.