ಹುಬ್ಬಳ್ಳಿ, ಅ 15 (DaijiworldNews/MS): ಕನ್ನಡದ ಹಿರಿಯ ನಟ, ಲೇಖಕ, ಪ್ರಾಧ್ಯಾಪಕ, ರಂಗಭೂಮಿ ಕಲಾವಿದ ಪ್ರೊ. ಜಿ.ಕೆ ಗೋವಿಂದ ರಾವ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಗಳ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಇಂದು ಹುಬ್ಬಳ್ಳಿಯ ತಮ್ಮ ಮಗಳ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಇಂದು ಸಂಜೆ ಹೊತ್ತಿಗೆ ಹುಬ್ಬಳ್ಳಿಯಲ್ಲೇ ಅವರ ಅಂತಿ ವಿಧಿ ವಿಧಾನ ನೇರವೇರಲಿದೆ ಅಂಥ ತಿಳಿದು ಬಂದಿದೆ
ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು.
ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ, ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು.
ಅವರ ಪ್ರಕಟಿತ ಕೃತಿಗಳು- ಈಶ್ವರ ಅಲ್ಲಾ (ಕಿರುಕಾದಂಬರಿ), ಶೇಕ್ಸ್ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್ಪಿಯರ್ ಸಂವಾದ (ವಿಮರ್ಶಾ ಲೇಖನಗಳು), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್: ತಮ್ಮ ಆಯ್ಕೆ ಯಾವುದು? (ಸಂಕೀರ್ಣ ಬರಹಗಳ ಸಂಗ್ರಹಗಳು).
ಜಿ.ಕೆ.ಗೋವಿಂದ ರಾವ್ ಗ್ರಹಣ ಸೇರಿದಂತೆ ಹಲವಾರು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಕನ್ನಡ ಟಿ ವಿ ಧಾರಾವಾಹಿಗಳಾದ ಮಹಾ ಪರ್ವದಲ್ಲಿ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.