ಹೈದರಾಬಾದ್, ಅ.15 (DaijiworldNews/PY): ಊಟ ಮಾಡುವ ಸಂದರ್ಭ ಬೇಯಿಸಿದ ಮೊಟ್ಟೆ ತಿನ್ನುವ ವೇಳೆ ಗಂಟಲಿನಲ್ಲಿ ಸಿಲುಕಿಕೊಂಡು ಮಹಿಳೆ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ನೇರಳಪಲ್ಲಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ನೀಲಮ್ಮ ಎಂದು ಗುರುತಿಸಲಾಗಿದೆ.
ಊಟ ಮಾಡುತ್ತಿದ್ದ ಸಂದರ್ಭ ನೀಲಮ್ಮ ಬೇಯಿಸಿದ ಮೊಟ್ಟೆಯನ್ನು ಕತ್ತರಿಸದೇ ಹಾಗೇ ಬಾಯಿಯೊಳಗೆ ಹಾಕಿಕೊಂಡಿದ್ದಾಳೆ. ಈ ಸಂದರ್ಭ ಮೊಟ್ಟೆ ಗಂಟಲಿನಲ್ಲಿ ಸಿಲುಕಿಕೊಂಡಿದೆ. ಮೊಟ್ಟೆ ಗಂಟಲಿನಿಂದ ಕೆಳಗೆ ಜಾರದೇ, ಹೊರಗೆ ಬಾರದೇ ನೀಲಮ್ಮನಿಗೆ ಉಸಿರಾಡಲು ಕಷ್ಟವಾಗಿದ್ದು, ಇದರಿಂದ ಆಕೆ ಮೃತಪಟ್ಟಿದ್ಧಾಳೆ.
ಮೊಟ್ಟೆಯನ್ನು ಕತ್ತರಿಸಿ ತಿನ್ನುತ್ತಿದ್ದರೆ ಈ ಅನಾಹುತ ಸಂಭವಿಸುತ್ತಿರಲಿಲ್ಲ ಎಂದು ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.