ನವದೆಹಲಿ ,ಅ 15 (DaijiworldNews/MS): ಅನಾರೋಗ್ಯದಿಂದ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಬುಧವಾರ ದಾಖಲಾಗಿರುವ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
'89 ವರ್ಷದ ಮನಮೋಹನ್ ಸಿಂಗ್ ಅವರು ಜ್ವರದಿಂದ ಬಳಲುತ್ತಿದ್ದು, ವೀಕ್ನೆಸ್ ಹೆಚ್ಚಾಗಿದ್ದ ಕಾರಣ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. " ಸಧ್ಯ ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ" ಎಂದು ಏಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮನಮೋಹನ್ ಸಿಂಗ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಟ್ವೀಟ್ ಮಾಡಿದ್ದು, 'ಡಾ. ಮನಮೋಹನ್ ಸಿಂಗ್ ಜೀ ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ' ಎಂದು ಪ್ರಧಾನಿ ಮೋದಿ ಹೇಳಿದ್ದರು.