ಕೊಡಗು, ಅ.15 (DaijiworldNews/PY): ತಾಯಿ ಹಾಗೂ ಮಗನಿಗೆ ಗುಂಡಿಕ್ಕಿದ ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕಿರಗೂರು ಗ್ರಾಮದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಗುಂಡಿಕ್ಕಿ ಹತ್ಯೆ ಮಾಡಿದ ಆರೋಪಿಯನ್ನು ಆಲೆಮಾಡ ಸಾಗರ್ (52) ಎಂಬಾತ ಮಧು(42) ಹಾಗೂ ಅವರ ತಾಯಿ ಯಶೋಧ ಎಂಬುವರಿಗೆ ಗುಂಡಿಕ್ಕಿ ಹತ್ಯೆ ಮಾಡಲು ಯತ್ನಿಸಿದ್ದಾನೆ.
ಗುಂಡಿನ ದಾಳಿಯ ಪರಿಣಾಮ ಮಧು ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ಯಶೋಧಾ ಸ್ಥಿತಿ ಗಂಭೀರವಾಗಿದೆ. ಗುಂಡಿಕ್ಕಿದ ಬಳಿಕ ಸಾಗರ್ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಜಯರಾಂ ಹಾಗೂ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.