ಮುಂಬೈ, ಅ.16 (DaijiworldNews/PY): "ಬಿಜೆಪಿಯು ವಿನಾಯಕ ದಾಮೋದರ್ ಸಾವರ್ಕರ್ ಅಥವಾ ಮಹಾತ್ಮ ಗಾಂಧಿ ಆಗಿರಬಹುದು ಇವರಿಬ್ಬರನ್ನು ಅರ್ಥ ಮಾಡಿಕೊಂಡಿಲ್ಲ" ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಇಲ್ಲಿನ ಷಣ್ಮುಖಾನಂದ ಸಭಾಂಗಣದಲ್ಲಿ ಶಿವಸೇನೆಯ ವಾರ್ಷಿಕ ದಸರಾ ಮಹೋತ್ಸವದಲ್ಲಿ ಮಾತನಾಡಿದ ಅವರು, "ವಿನಾಯಕ ದಾಮೋದರ ಸಾವರ್ಕರ್ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
"ಅಂಡಮಾನ್ನ ಸೆಲ್ಯುಲಾರ್ ಜೈಲಿನಲ್ಲಿ ಬಂಧಿಯಾಗಿದ್ದ ಸಾರ್ವಕರ್ ಅವರು ಗಾಂಧಿ ಅವರ ಸಲಹೆಯ ಮೇರೆಗೆ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು" ಎಂದು ಇತ್ತೀಚೆಗೆ ರಾಜನಾಥ್ ಸಿಂಗ್ ಹೇಳಿದ್ದರು.
"ಮಹಾರಾಷ್ಟ್ರದ ದೆಗ್ಲೂರು ವಿಧಾನಸಭಾ ಉಪಚುನಾವಣೆಗೆ ಶಿವ ಸೇನಾದಿಂದ ಬಿಜೆಪಿಗೆ ಪಕ್ಷಾಂತರಗೊಂಡಿರುವವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ" ಎಂದು ಎಂದಿದ್ದಾರೆ
"ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಉಪಚುನಾವಣೆಗೆ ಅಭ್ಯರ್ಥಿಯನ್ನು ಆಮದು ಮಾಡಿಕೊಳ್ಳುತ್ತಿದೆ" ಎಂದು ವ್ಯಂಗ್ಯವಾಡಿದ್ದಾರೆ.