ಹುಬ್ಬಳ್ಳಿ, ಅ.16 (DaijiworldNews/PY): ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, "ಹೆಚ್ ಡಿ ಕುಮಾರಸ್ವಾಮಿ ಅವರ ಮಾತು ವೇದ ವಾಕ್ಯ ಅಲ್ಲ. ಈ ಬಗೆಗ ಬಡವರು ಹೇಳಿದರೆ ಅದು ಬೇರೆ. ಕುಮಾರಸ್ವಾಮಿ ಮಾತಿಗೆ ಕಿಮ್ಮತ್ತು ಕೊಡುವ ಹಂಗಿಲ್ಲ. ಯಾರು ಹಸಿದವರು ಹಾಗೂ ಹಸಿದವರು ಎಂದೂ ಈ ರೀತಿ ಮಾತನಾಡುವುದಿಲ್ಲ" ಎಂದಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ! ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ʼಅಹಿಂದʼ ಎಂದು ಜನರನ್ನು 'ಅಡ್ಡದಾರಿ' ಹಿಡಿಸಿದ ʼಸಿದ್ದಹಸ್ತ ಶೂರರುʼ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ʼಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ ಎಂದು ಹೆಚ್ಡಿಕೆ ಟ್ವೀಟ್ ಮಾಡಿದ್ದರು.