ನವದೆಹಲಿ, ಅ 16 (DaijiworldNews/MS): ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ತಾವು ಪೂರ್ಣಾವಧಿ ಪಕ್ಷದ ಸಕ್ರಿಯ ಅಧ್ಯಕ್ಷೆ ಮತ್ತು ಮಾಧ್ಯಮಗಳ ಮೂಲಕ ನಾಯಕರು ತಮ್ಮೊಂದಿಗೆ ಮಾತನಾಡುವ ಅಗತ್ಯವಿಲ್ಲ ಎನ್ನುವ ಮೂಲಕ ಪಕ್ಷದೊಳಗಿನ ಟೀಕಾಕಾರರಿಗೆ ಪಕ್ಷ ಕಾರ್ಯಕಾರಿಣಿ ಸಭೆಯಲ್ಲಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಕೊರೊನಾ ಕಾರಣದಿಂದ ನಡೆಯದೇ ಉಳಿದಿದ್ದ ಸಿಡಬ್ಲ್ಯೂಸಿ ಸಭೆ ಒಂದೂವರೆ ವರ್ಷದ ಬಳಿಕ ಶನಿವಾರ ಆರಂಭವಾಯಿತು.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಕಾಂಗ್ರೆಸ್ ಅಧ್ಯಕ್ಷರು "ನಾನು ಯಾವಾಗಲೂ ನೇರವಾದ ಮುಕ್ತವಾಗಿರುವುದನ್ನು ಮೆಚ್ಚುತ್ತೇನೆ. ಮಾಧ್ಯಮಗಳ ಮೂಲಕ ನನ್ನೊಂದಿಗೆ ಮಾತನಾಡುವ ಅಗತ್ಯವಿಲ್ಲ. ಆದ್ದರಿಂದ ನಾವೆಲ್ಲರೂ ಮುಕ್ತ ಮತ್ತು ಪ್ರಾಮಾಣಿಕ ಚರ್ಚೆಯನ್ನು ಮಾಡೋಣ. ಈ ಕೊಠಡಿಯ ನಾಲ್ಕು ಗೋಡೆಗಳ ಹೊರಗೆ ಏನು ಸಂವಹನ ಮಾಡಬೇಕು ಎನ್ನುವುದು ಸಿಡಬ್ಲ್ಯೂಸಿಯ ಸಾಮೂಹಿಕ ನಿರ್ಧಾರ್ವಾಗಿರಬೇಕು" ಎಂದು ಹೇಳಿದರು.
ಇಡೀ ಸಂಘಟನೆ ಕಾಂಗ್ರೆಸ್ನ ಪುನರುಜ್ಜೀವನವನ್ನು ಬಯಸುತ್ತದೆ. ಇದಕ್ಕೆ, ಒಗ್ಗಟ್ಟು, ಪಕ್ಷದ ಹಿತವೇ ಅಂತಿಮ ಎಂಬ ಮನೋಭವಾ ಅಗತ್ಯ. ಎಲ್ಲಕ್ಕಿಂತ ಸ್ವಯಂ ನಿಯಂತ್ರಣ ಮತ್ತು ಶಿಸ್ತಿನ ಅಗತ್ಯವಿದೆ’ ಎಂದು ಕಿವಿಮಾತು ಹೇಳಿದರು.
ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂಬ ಸರ್ಕಾರದ ಪ್ರಚಾರದ ಹೊರತಾಗಿಯೂ ದೇಶದ ಆರ್ಥ ವ್ಯವಸ್ಥೆಯು ಕಳವಳಕಾರಿಯಾಗಿದೆ. ರಾಷ್ಟ್ರದ ಆಸ್ತಿ ಮಾರಾಟವೇ, ದೇಶದ ಆರ್ಥ ವ್ಯವಸ್ಥೆಯನ್ನು ಸರಿ ದಾರಿಗೆ ತರಲು ಇರುವ ಮಾರ್ಗವೆಂದು ಸರ್ಕಾರ ಭಾವಿಸಿಕೊಂಡಂತೆ ಕಾಣುತ್ತಿದೆ,‘ ಎಂದು ಸೋನಿಯಾ ಈ ವೇಳೆ ಬೇಸರ ವ್ಯಕ್ತಪಡಿಸಿದರು.