ಹುಬ್ಬಳ್ಳಿ,ಅ.16 (DaijiworldNews/HR): ಮುಖ್ಯಮಂತ್ರಿ ಸ್ಥಾನ ಉಳಿಸಿ ಕೊಳ್ಳಲು ಬಸವರಾಜ ಬೊಮ್ಮಾಯಿ ಅವರು ಆರ್ಎಸ್ಎಸ್ನ್ನು ಹೊಗಳುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,"ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಲತಃ ಆರ್ಎಸ್ಎಸ್ ಅಲ್ಲ. ಅಲ್ಲಿ ಹೋಗಿ ಸೇರಿ ಕೊಂಡಿದ್ದಾರೆ. ಈಗ ಮುಖ್ಯಮಂತ್ರಿ ಸಿಎಂ ಸ್ಥಾನ ಉಳಿಸಿ ಕೊಳ್ಳಬೇಕೆಂದರೆ ಆರ್ಎಸ್ಎಸ್ ಹೊಗಳಲೇ ಬೇಕಾದ ಅನಿವಾರ್ಯತೆಯಿದೆ" ಎಂದರು.
ಇನ್ನು ಬಿ.ಎಸ್.ಯಡಿಯೂರಪ್ಪ ಅವರನ್ನು ನಾನು ಭೇಟಿಯಾದೆ ಎಂಬ ಸುದ್ದಿ ಅಪ್ಪಟ ಸುಳ್ಳು. ಅದನ್ನು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಯಡಿಯೂರಪ್ಪ ಆರೆಸ್ಸೆಸ್ನಿಂದ ಬಂದವರು. ನಾನು ಅವರು ಸೇರಲು ಸಾಧ್ಯವೇ ಇಲ್ಲ" ಎಂದಿದ್ಡಾರೆ.
"ನಾನು ರಾಜಕೀಯವಾಗಿ ಆರೆಸ್ಸೆಸ್ ವಿರುದ್ಧ ಬೆಳೆದವನು. ಕಾಂಗ್ರೆಸ್ ಜಾತ್ಯಾತೀತ, ಪ್ರಜಾಪ್ರಭುತ್ವಕ್ಕೆ ಬದ್ಧವಾಗಿರುವ ಪಕ್ಷ. ಬಿಜೆಪಿ ಇದಕ್ಕೆ ವಿರುದ್ಧವಾದ ಪಕ್ಷ ಎಂದು ಹೇಳಿದ್ದಾರೆ.