ದಾವಣಗೆರೆ, ಅ.16 (DaijiworldNews/HR): ಸರ್ಕಾರದ ಸೌಲಭ್ಯಗಳನ್ನು ಜನರ ಬಳಿಗೆ ಒಯ್ಯುವ ಕಾರ್ಯ ಮುಂದಿನ ಜನವರಿ 26ರಿಂದ ಜಾರಿಗೆ ತರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ರೇಷನ್ ಅನ್ನು ನಿಮ್ಮ ಮನೆ ಬಾಗಿಲಿಗೆ ಕೊಡುವ ವ್ಯವಸ್ಥೆ ಮಾಡುತ್ತೇವೆ. ಅದಕ್ಕೆ ಎಲ್ಲ ರೀತಿಯ ಸಿದ್ಧತೆ ನಡೆಸುತ್ತಿದ್ದೇವೆ. ಸಾಮಾಜಿಕ ಭದ್ರತೆ ನಿಮ್ಮ ಮನೆಗೆ ಬರಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಎಲ್ಲ ಸರ್ಟಿಫಿಕೆಟ್ಗಳು ಸಿಗಬೇಕು ಎಂಬುದು ನಮ್ಮ ಉದ್ದೇಶ" ಎಂದರು.
ಇನ್ನು ಪ್ರಾಯೋಗಿಕವಾಗಿ ನವೆಂಬರ್ 1ರಂದು ಜನಸೇವಕ ಕಾರ್ಯಕ್ರಮಗಳನ್ನು ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಮಾಡಲಾಗುವುದು. ಬಳಿಕ ಜ.26ರಿಂದ ರಾಜ್ಯಕ್ಕೆ ವಿಸ್ತರಣೆ ಗೊಳಿಸಲಾಗುವುದು ಎಂದಿದ್ದಾರೆ.
ನಾವು ಸ್ವಚ್ಛ, ದಕ್ಷ ಮತ್ತು ಜನಪರ ಆಡಳಿತ ಕೊಡುತ್ತೇವೆ. ಅದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.