ಬೆಂಗಳೂರು, ಅ.16 (DaijiworldNews/HR): ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 264 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2, 98, 3133ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಇಂದು 264 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,421 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸದ್ಯ ರಾಜ್ಯದಲ್ಲಿ 9,508 ಸಕ್ರಿಯ ಪ್ರಕರಣಗಳಿವೆ.
ಇನ್ನು ರಾಜ್ಯದಲ್ಲಿ ಇಂದು ಕೊರೊನಾಗೆ 6 ಮಂದಿ ಬಲಿಯಾಗಿದ್ದು, ಮೃತರ ಒಟ್ಟಾರೇ ಸಂಖ್ಯೆ 37, 937ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.43 ರಷ್ಟಿದ್ದು, ಮರಣ ಪ್ರಮಾಣ ಶೇ. 2.27 ರಷ್ಟಿದೆ.
ಬೆಂಗಳೂರಿನಲ್ಲಿ 121 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 132 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಇಂದು ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ.